Home ಟಾಪ್ ಸುದ್ದಿಗಳು ಪ್ರತಾಪಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ: ವಿಜಯೇಂದ್ರ

ಪ್ರತಾಪಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ: ವಿಜಯೇಂದ್ರ

ಮಡಿಕೇರಿ: ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.


ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದ ಅವರು, ಪ್ರತಾಪಸಿಂಹ ಅವರಿಗೆ ಟಿಕೆಟ್ ತಪ್ಪಿದೆ ಎಂದು ಭಾವಿಸಬಾರದು. ಅವರು ಮುಂದೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಭೂಮಿಕೆ ನಿಭಾಯಿಸಲಿದ್ದಾರೆ ಎಂದರು.


ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇವಲ ಒಂದು ಜಾತಿಗೆ ಮಾತ್ರ ಸೀಮಿತರಾಗಿಲ್ಲ. ಅವರು ಸಾಮಾನ್ಯ ಕಾರ್ಯಕರ್ತರ ಇಚ್ಛೆಗೆ ಸ್ಪಂದಿಸಲಿದ್ದಾರೆ ಎಂದರು.

Join Whatsapp
Exit mobile version