ಬೆಂಗಳೂರು: ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಹಿಜಾಬ್ ಅನ್ನು ನಾನು ಸಮವಸ್ತ್ರದ ರೀತಿಯಲ್ಲಿ ನೋಡಿದ್ದೆ, ನಾನು ಶಾಸಕನಾಗುವ ಮುನ್ನ ಆ ಶಾಲೆಯಲ್ಲಿ ಸಮವಸ್ತ್ರ ಪದ್ದತಿ ಜಾರಿಯಲ್ಲಿತ್ತು. ಹಾಗಾಗಿ, ಅದು ಹೋರಾಟಕ್ಕೆ ಕಾರಣವಾಯಿತೇ ವಿನಃ, ಧರ್ಮಾಧಾರಿತವಾಗಿ ನೋಡಿರಲಿಲ್ಲ ” ಎಂದು ಅಲಿಯಾ ಅಸ್ಸಾದಿ ಟ್ವೀಟಿಗೆ ಮಾಜಿ ಸಚಿವ ಮಾಜಿ ಶಾಸಕ ರಘುಪತಿ ಭಟ್ ಸ್ಪಷ್ಟನೆ ನೀಡಿರುವುದನ್ನು ಉಲ್ಲೇಖಿಸಿ ಪ್ರತಾಪ್ ಸಿಂಹ ಈ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ MLA ಟಿಕೆಟ್ಟೂ ಸಿಗಲಿಲ್ಲ, MLC ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಬರೆದು ಕೊಂಡಿದ್ದಾರೆ.