Home ಟಾಪ್ ಸುದ್ದಿಗಳು ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಿಂದ ಅರ್ಧದಲ್ಲೇ ಎದ್ದು ಹೋದ ಪ್ರತಾಪ್ ಸಿಂಹ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಿಂದ ಅರ್ಧದಲ್ಲೇ ಎದ್ದು ಹೋದ ಪ್ರತಾಪ್ ಸಿಂಹ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಇಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉಭಯ ಪಕ್ಷಗಳ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಪ್ರತಾಪ್ ಸಿಂಹ ಸಭೆಯಿಂದ ಅರ್ಧದಲ್ಲೇ ಎದ್ದು ಹೋದ ಘಟನೆ ಬೆಳಕಿಗೆ ಬಂದಿದೆ.


ವೇದಿಕೆಯ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆ ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ ಒಡೆಯರ್ ಉಪಸ್ಥಿತರಿದ್ದು, ಕಾರ್ಯಕ್ರಮದ ಅರ್ಧಭಾಗದಲ್ಲೇ ಸಂಸದ ಪ್ರತಾಪ್ ಸಿಂಹ ಎದ್ದು ಹೋಗಿದ್ದಾರೆ.


ಟಿಕೆಟ್ ಸಿಗದಿರುವುದಕ್ಕೆ ಬೇಸರದಿಂದ ಇನ್ನೂ ಹೊರಬರಲಾಗದೆ ಪ್ರಚಾರದ ಸಭೆಗಳಲ್ಲೂ ಅವರು ತಾವು ಮಾಡಿದ ಸಾಧನೆಗಳನ್ನೇ ಹೇಳುತ್ತಾ ಸಹಾನುಭೂತಿ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಲ ಕಾರ್ಯಕರ್ತರು ತಿಳಿಸಿದ್ದಾರೆ.

Join Whatsapp
Exit mobile version