Home ಟಾಪ್ ಸುದ್ದಿಗಳು ಟಿಕೆಟ್ ಕೈತಪ್ಪುವ ವದಂತಿ ಬೆನ್ನಲ್ಲೇ ಅಚ್ಚರಿಯ ಹೇಳಿಕೆ ನೀಡಿದ ಪ್ರತಾಪ್ ಸಿಂಹ

ಟಿಕೆಟ್ ಕೈತಪ್ಪುವ ವದಂತಿ ಬೆನ್ನಲ್ಲೇ ಅಚ್ಚರಿಯ ಹೇಳಿಕೆ ನೀಡಿದ ಪ್ರತಾಪ್ ಸಿಂಹ

ಮೈಸೂರು: ಪಕ್ಷ ನನ್ನನ್ನು ಕೈಬಿಡುವುದಿಲ್ಲ ಎಂಬ ಅಚಲ ನಂಬಿಕೆ ಇದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು.


ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ವರದಿಗಳ ಬೆನ್ನಲ್ಲೇ ಅವರು ಪ್ರತಿಕ್ರಿಯೆ ನೀಡಿದರು.


ನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿಯ ಜನ ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲ ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದರು. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುವ ಬಗ್ಗೆ ಭರವಸೆ ಇದೆ. ಆದರೆ ಅಂತಿಮವಾಗಿ ಪಕ್ಷದ ಹೈಕಮಾಂಡ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಇಂದು ಪ್ರತಾಪ್ ಸಿಂಹ ಹೇಳಿದರು.


ನಾನು ಮೊದಲನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. ಎರಡನೇ ಬಾರಿ ಸ್ಪರ್ಧಿಸುವಾಗಲು ಮೋದಿ ಹೆಸರಿನಲ್ಲಿಯೇ ಸ್ಪರ್ಧಿಸಿದ್ದೆ. ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯಗಳಿಸುತ್ತೇನೆ. ಪಕ್ಷದ ವಿಶ್ವಾಸ ನನ್ನ ಮೇಲಿದೆ. ನನಗೆ ಮತ್ತೆ ಅವಕಾಶ ಸಿಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

Join Whatsapp
Exit mobile version