ಪ್ರತಾಪ್ ಸಿಂಹ ಭಯೋತ್ಪಾದಕ ಎಂಬ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲ: ಎಂ.ಲಕ್ಷ್ಮಣ್

Prasthutha|

ಮೈಸೂರು: ಸಂಸದ ಪ್ರತಾಪ ಸಿಂಹ ಭಯೋತ್ಪಾದಕ ಎಂಬ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಾಪಸಿಂಹ ಪ್ರಚೋದಿಸುತ್ತಾರೆ ಎಂದು ಟೀಕಿಸುತ್ತೇವೇ ಹೊರತು ಭಯೋತ್ಪಾದಕ ಎಂದು ಹೇಳಿಲ್ಲ. ಇತ್ತೀಚೆಗೆ ರಾಮಸ್ವಾಮಿ ವೃತ್ತದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಾಪ ಸಿಂಹ ಅವರ ಕೈಯಲ್ಲಿ ಬಾಂಬ್ ಇಟ್ಟಿಕೊಂಡಿರುವಂತೆ ಚಿತ್ರಿಸಿ, ದೇಶದ್ರೋಹಿ, ಭಯೋತ್ಪಾದಕ ಎಂದೆಲ್ಲಾ ಬರೆಯಲಾಗಿತ್ತು.

ಪ್ರತಿಭಟನೆ ನಡೆಸಿದ ವೇದಿಕೆಯ ಕೆ.ಎಸ್. ಶಿವರಾಮ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆ ಹಿಂದೆ, ಮುಂದೆ ನಿಂತಿರುತ್ತಾರೆ. ಅವರು ಕಾಂಗ್ರೆಸ್ ಪಕ್ಷದ ಸದಸ್ಯರೂ ಅಲ್ಲ. ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂದು ತಿಳಿಸಿದರು.



Join Whatsapp