Home ಟಾಪ್ ಸುದ್ದಿಗಳು ಬೆಂಗಳೂರಿನ ನೂತನ‌ ಪೊಲೀಸ್‌ ಆಯುಕ್ತರಾಗಿ ಪ್ರತಾಪ್‌ ರೆಡ್ಡಿ ನೇಮಕ

ಬೆಂಗಳೂರಿನ ನೂತನ‌ ಪೊಲೀಸ್‌ ಆಯುಕ್ತರಾಗಿ ಪ್ರತಾಪ್‌ ರೆಡ್ಡಿ ನೇಮಕ

ಬೆಂಗಳೂರು: ನಗರದ ನೂತನ ಪೊಲೀಸ್‌ ಆಯುಕ್ತರನ್ನಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಿ.ಹೆಚ್‌.ಪ್ರತಾಪ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗೂ ಕಮಿಷನರ್‌ ಸ್ಥಾನದಲ್ಲಿದ್ದ ಕಮಲ್‌ ಪಂತ್‌ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾಯಿಸಲಾಗಿದೆ.


1991 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ನಗರದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು. ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ನಗರ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.


ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಕುಮಾರ್‌ ನಿಯುಕ್ತಿಗೊಂಡಿದ್ದಾರೆ. ಕೆಎಸ್‌ಆರ್‌ಪಿ ಎಡಿಜಿಪಿಯಾಗಿ ಆರ್‌.ಹಿತೇಂದ್ರ ಹಾಗೂ ಸಿಐಡಿ ಎಸ್‌ಪಿಯಾಗಿ ಎಂ.ಎನ್.ಅನುಚೇತ್‌ ನೇಮಕಗೊಂಡಿದ್ದಾರೆ.
ಅಷ್ಟೇ ಅಲ್ಲದೆ ರಾಜ್ಯದಲ್ಲಿ 37 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಾಂಜಾ ಕೇಸ್‌ಗೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಅಶ್ವಥ್ ಗೌಡರನ್ನು ತೀರ್ಥಹಳ್ಳಿ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್‌ ಆಗಿ ವರ್ಗಾಯಿಸಲಾಗಿದೆ.

Join Whatsapp
Exit mobile version