ಕೆಯುಡಬ್ಲ್ಯೂಜೆ ಸಂಘಟಿಸಿದ್ದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಚಾಲನೆ

Prasthutha|

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲ್ಯೂಜೆ) ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಸತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು. ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು, ಪ್ರತಿಭಾ ಪುರಸ್ಕಾರಕ್ಕೆ ಚಾಲನೆ ನೀಡಿದರು.

- Advertisement -

ಕಾರ್ಯಕ್ರಮದಲ್ಲಿ ಖ್ಯಾತ ನಟಿ ತಾರಾ ಅನೂರಾಧ, ಗಡಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ, ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಕೆಯುಡಬ್ಲ್ಯೂಜೆ ಪದಾಧಿಕಾರಿಗಳು ಹಾಜರಿದ್ದರು.

ಪ್ರತಿ ಜಿಲ್ಲೆಯಿಂದ ಪತ್ರಕರ್ತರ ಮಕ್ಕಳು ಭಾಗವಹಿಸುವ ಮೂಲಕ ಇದೇ ಮೊದಲ ಬಾರಿಗೆ ಕೆಯುಡಬ್ಲ್ಯೂಜೆ ಸಂಘಟಿಸಿದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಅರ್ಥಪೂರ್ಣವಾಗಿಸಿದ್ದು ವಿಶೇಷ.

Join Whatsapp