Home ಟಾಪ್ ಸುದ್ದಿಗಳು ಜನವರಿ 14ರಂದು ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ಜನವರಿ 14ರಂದು ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ಮಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಸರಕಾರಿ ನೌಕರರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಜನವರಿ 14ರಂದು ಬೆಳಗ್ಗೆ 10.30ಕ್ಕೆ ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದ.ಕ.ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಕೆ. ಕೃಷ್ಣ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಶಾಸಕ ಡಿ. ವೇದವ್ಯಾಸ್ ಕಾಮತ್ ಉದ್ಘಾಟಿಸಲಿದ್ದಾರೆ. ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಪುರಸ್ಕರಿಸಲಿದ್ದಾರೆ ಎಂದರು.


ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪದಕಗಳನ್ನು ಗಳಿಸಿದ ಸರಕಾರಿ ನೌಕರರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಸನ್ಮಾನಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ. ವೈ ನಾಯ್ಕ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ನವೀನ್ ಕುಮಾರ್ ಎಂ .ಎಸ್, ಗಣೇಶ್ ರಾವ್, ಲಿಲ್ಲಿ ಪಾಯಸ್, ಹರೀಶ್ ಕುಮಾರ್ ಎಂ,ಉಪಾಧ್ಯಕ್ಷರು.

Join Whatsapp
Exit mobile version