ಪ್ರವೀಣ್ ಹತ್ಯೆ ಪ್ರಕರಣ: ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ

Prasthutha|

- Advertisement -

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದಿತ್ಯವಾರ (ಆಗಸ್ಟ್ 7) ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುತ್ತೂರು ಡಿವೈಎಸ್ ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಇಂದು ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಘಟನೆಗೆ ಸಂಬಂಧಿಸಿ ಆರೋಪಿಗಳಾದ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ ಮತ್ತು ಸುಳ್ಯ ನಾವೂರು ನಿವಾಸಿ ಆಬಿದ್ ಎಂಬವರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು.

Join Whatsapp
Exit mobile version