ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ, ಬಂಧಿತರ ಸಂಖ್ಯೆ 6ಕ್ಕೇರಿಕೆ

Prasthutha|

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಸುಳ್ಯದ ನಾವೂರು ನಿವಾಸಿ ಆಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್ (28) ಎಂದು ಗುರುತಿಸಲಾಗಿದೆ.

ಕೊಲೆಯ ಹಿಂದಿರುವ ಎಲ್ಲರನ್ನೂ ಗುರುತಿಸಲಾಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

- Advertisement -

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಪೊಲೀಸರು ಈವರೆಗೆ 6 ಮಂದಿಯನ್ನು ಬಂಧಿಸಿದ್ದಾರೆ.

Join Whatsapp