Home ಕರಾವಳಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ, ಬಂಧಿತರ ಸಂಖ್ಯೆ 6ಕ್ಕೇರಿಕೆ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ, ಬಂಧಿತರ ಸಂಖ್ಯೆ 6ಕ್ಕೇರಿಕೆ

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸುಳ್ಯದ ನಾವೂರು ನಿವಾಸಿ ಆಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್ (28) ಎಂದು ಗುರುತಿಸಲಾಗಿದೆ.

ಕೊಲೆಯ ಹಿಂದಿರುವ ಎಲ್ಲರನ್ನೂ ಗುರುತಿಸಲಾಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಪೊಲೀಸರು ಈವರೆಗೆ 6 ಮಂದಿಯನ್ನು ಬಂಧಿಸಿದ್ದಾರೆ.

Join Whatsapp
Exit mobile version