ಮಡಿಕೇರಿ: ಪ್ರವೀಣ್ ನೆಟ್ಟಾರು ಹತ್ಯೆ ಆರ್.ಎಸ್.ಎಸ್ ನವರಿಂದಲೇ ಆಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮತ್ತೋರ್ವ ಯುವಕನ ಹತ್ಯೆಯೂ ಆರ್.ಎಸ್.ಎಸ್ ನವರಿಂದಲೇ ಆಗಿದೆ. ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾದರೆ ಸತ್ಯಾಂಶ ಹೊರಬೀಳಲಿದೆ ಎಂದು ಅವರು ಹೇಳಿದರು
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಹೆಸರಿನಲ್ಲಿ ಖಾದಿ ಧ್ವಜವನ್ನು ಬದಲಾಯಿಸಿ ಖಾದಿ ಉದ್ಯಮಕ್ಕೆ ಅನ್ಯಾಯ ಮಾಡಲಾಗಿದೆ. ಈ ಯೋಜನೆ ಒಂದು ನಾಟಕ ಎಂದು ಹೇಳಿದರು.
ರೈತರ ಸಾಲ ಮನ್ನಾ ನಾವು ಮಾಡಿದ್ದೇವೆಂದು ಎಚ್.ಡಿ ಕುಮಾರಸ್ವಾಮಿ ಹೇಳಿಕೊಳ್ಳುತ್ತಾರೆ. ಕಾಂಗ್ರೆಸ್ ಶಾಸಕರ ಸಹಕಾರದಿಂದಲೇ ಸಾಲ ಮನ್ನ ಮಾಡಲಾಗಿದೆ. ಕುಮಾರಸ್ವಾಮಿ ತಾಜ್ ಹೊಟೇಲ್ ನಲ್ಲಿದ್ದುಕೊಂಡು ಆಡಳಿತ ನಡೆಸಿದ್ದರು. ಈ ಕಾರಣದಿಂದಲೇ ಶಾಸಕರು ಬೇರೆ ಪಕ್ಷಕ್ಕೆ ವಲಸೆ ಹೋಗುವಂತಾಯಿತು ಎಂದು ಎಂ.ಲಕ್ಷ್ಮಣ್ ಹೇಳಿದ್ದಾರೆ.