Home ಕರಾವಳಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತ ಆರೋಪಿಗಳಿಗೆ ಪೊಲೀಸ್ ಕಸ್ಟಡಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತ ಆರೋಪಿಗಳಿಗೆ ಪೊಲೀಸ್ ಕಸ್ಟಡಿ

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬಂಧಿಸಲಾದ ಮೂವರು ಪ್ರಮುಖ ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.


ಬಂಧಿತ ಆರೋಪಿಗಳಾದ ಶಿಯಾಬ್ (33), ರಿಯಾಝ್ (27), ಬಶೀರ್ (29) ಎಂಬವರನ್ನು ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆಗಸ್ಟ್ 16ರವರೆಗೆ ಆರು ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

Join Whatsapp
Exit mobile version