ಸುಳ್ಯ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆ ಪಳ್ಳಿಮಜಲಿನ ಸದ್ದಾಂ (32) ಹಾಗು ಹಾರಿಸ್ (44) ಬಂಧಿತ ಆರೋಪಿಗಳು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ಜು. 28ರಂದು ಶಫೀಕ್ ಬೆಳ್ಳಾರೆ ಮತ್ತು ಸವಣೂರಿನ ಝಾಕಿರ್ ಎಂಬವರನ್ನು ಬಂಧಿಸಲಾಗಿತ್ತು. ಇದರ ಆಧಾರದಲ್ಲಿ ಮತ್ತೆ ಇಬ್ಬರನ್ನು ಇಂದು ಬಂಧಿಸಲಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.