SDPI ದ.ಕ ಜಿಲ್ಲಾ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

Prasthutha|

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆಯು ಪಕ್ಷದ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಅವರ ಅಧ್ಯಕ್ಷತೆಯಲ್ಲಿ ಇಂದು ಕೈಕಂಬದಲ್ಲಿರುವ ಪಕ್ಷದ ಕಛೇರಿಯಲ್ಲಿ ಜರುಗಿತು.

- Advertisement -

ವಿಶೇಷ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಮಾತನಾಡಿ ” ಪಕ್ಷವನ್ನು ತಳ ಮಟ್ಟದಿಂದ ಬಲವರ್ಧನೆಗೊಳಿಸಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಪ್ರತಿಯೊಬ್ಬ ಕಾರ್ಯಕರ್ತರು ಸಜ್ಜಾಗಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಪಕ್ಷವನ್ನು ಮತ್ತಷ್ಟು ಉತ್ತುಂಗಕ್ಕೇರಿಸುವ ಸತತ ಪ್ರಯತ್ನ ಮಾಡಬೇಕು ಎಂದು ನುಡಿದರು.

ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಚುನಾವಣೆಯಲ್ಲಿ ಪ್ರತಿನಿಧಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

- Advertisement -

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು ,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಜಮಾಲ್ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಶಾಕಿರ್ ಅಳಕೆಮಜಲು ಹಾಗೂ ಜಿಲ್ಲಾ ಸಮಿತಿ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರು ಉಪಸ್ಥಿತರಿದ್ದರು.

Join Whatsapp