SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

Prasthutha|

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯು ಕ್ಷೇತ್ರಾಧ್ಯಕ್ಷ ಮೂನಿಶ್ ಆಲಿ ಅಧ್ಯಕ್ಷತೆಯಲ್ಲಿ ಕೈಕಂಬದ ಕಛೇರಿಯಲ್ಲಿ ನಡೆಯಿತು.

- Advertisement -

ವಿಧಾನಸಭಾ ಕ್ಷೇತ್ರ ಚುನಾವಣೆಯು ಸನ್ನಿಹಿತವಾಗಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರನ್ನು ಪಕ್ಷವು ಕಣಕ್ಕಿಳಿಸಿದೆ. ಕಾರ್ಯಕರ್ತರೆಲ್ಲರೂ ಚುನಾವಣೆಯನ್ನು ಎದುರಿಸಲು ಸನ್ನದ್ಧರಾಗಬೇಕು ಎಂದು SDPI ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಕರೆಕೊಟ್ಟರು.

ಈ ಸಂದರ್ಭದಲ್ಲಿ ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ, ಕ್ಷೇತ್ರ ಚುನಾವಣಾ ಉಸ್ತುವಾರಿ ಶಾಹುಲ್ ಎಸ್.ಎಚ್ ಮತ್ತು ಕ್ಷೇತ್ರ ಸಮಿತಿಯ ನಾಯಕರು ಉಪಸ್ಥಿತರಿದ್ದರು.

Join Whatsapp