ಬೆಂಗಳೂರು: ಪ್ರೀತಂಗೌಡಗೆ ಸ್ವಲ್ಪ ಅಸಮಾಧಾನ ಇತ್ತು. ಅದನ್ನ ಸರಿ ಮಾಡೋ ಕೆಲಸ ಆಗಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ, ವಿಜಯೇಂದ್ರ ಅವರನ್ನ ಭೇಟಿಯಾಗಿ ಸಹಕಾರ ಕೋರಿದ್ದೇವೆ. ನಮ್ಮ ಕ್ಷೇತ್ರಕ್ಕೆ ಪ್ರಚಾರ ಮಾಡಬೇಕು, ಸಹಕಾರ ಕೊಡಬೇಕು, ಆಶೀರ್ವಾದ ಮಾಡಬೇಕು ಅಂತ ಮನವಿ ಮಾಡಿದ್ದೇವೆ. ಯಡಿಯೂರಪ್ಪ ಅವರು ಸಂಪೂರ್ಣ ಭರವಸೆ ಕೊಟ್ಟಿದ್ದಾರೆ. ನನ್ನ ಚುನಾವಣೆ ಅಂತ ಮಾಡಿಕೊಡ್ತೀನಿ ಎಂದು ಭರವಸೆ ನೀಡಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಹೋಗ್ತೀವಿ ಎಂದರು.
ನಮ್ಮ ಗುರಿ ಮತ್ತೆ ಮೋದಿ ಅವರನ್ನು ಪ್ರಧಾನಿಯಾಗಿ ಮಾಡಬೇಕು. ಇಡೀ ದೇಶದಲ್ಲಿ 400 ಸೀಟು ಬರಬೇಕು. ಅದರಲ್ಲಿ ನಾನು ಒಬ್ಬನಾಗಿರಬೇಕು. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಎರಡೆರೆಡು ಬಾರಿ ಬಂದು ಪ್ರಚಾರ ಮಾಡ್ತೀನಿ ಅಂತ ಹೇಳಿದ್ದಾರೆ. ನನ್ನ ಮಗ ಅಂದುಕೊಂಡ ಕೆಲಸ ಮಾಡೋದಾಗಿ ಹೇಳಿದ್ದಾರೆ ಎಂದು ತಿಳಿಸಿದರು.