ಉತ್ತರ ಪ್ರದೇಶದಲ್ಲಿ ಗರ್ಭಿಣಿಯ ಮೇಲೆ ಅತ್ಯಾಚಾರ: ಯುವತಿ ಸ್ಥಿತಿ ಗಂಭೀರ

Prasthutha|

ಬರೇಲಿ : ಗರ್ಭಿಣಿಯ ಮೇಲೆ ಮೂವರು ಪುರುಷರು ಅತ್ಯಾಚಾರವೆಸಗಿದ ಧಾರುಣ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಸಂತ್ರಸ್ತೆಯ ಪತಿಯ ದೂರಿನ ಪ್ರಕಾರ, ಮಹಿಳೆ ಬಿಶಾರತ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮೂವರು ಪುರುಷರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

ಮೂರು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಗೆ ಗರ್ಭಪಾತವಾಗಿದೆ ಎಂದು ಪೊಲೀಸರು ತಿಳಿಸಿದ್ದು, ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರಕರಣದ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಮಂಗಳವಾರ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ವಾಸ್ತವಾಂಶಗಳು ಹೊರಬೀಳುತ್ತಿದ್ದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ರಾಜಕುಮಾರ್ ಅಗರವಾಲ್ ತಿಳಿಸಿದ್ದಾರೆ.

- Advertisement -