ಬುರೈಧ: ಅನಿವಾಸಿ ಕನ್ನಡಿಗರನ್ನು ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಒಂದುಗೂಡಿಸುವ ನಿಟ್ಟಿನಲ್ಲಿ ಇಂಡಿಯನ್ ಸೋಶಿಯಲ್ ಫೋರಂ ಬುರೈಧ ಕರ್ನಾಟಕ ಚಾಪ್ಟರ್ ವತಿಯಿಂದ ಜೂನ್ 23 ರಂದು ನಡೆಯುವ “ಸ್ನೇಹ ಸಮ್ಮಿಲನ” ಎಂಬ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಲಿದ್ದು, ಇದರ ಪೂರ್ವಭಾವಿ ಕಾರ್ಯಕ್ರಮವು ಬುರೈಧದಲ್ಲಿ ನಡೆಯಿತು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಇಂಡಿಯನ್ ಸೋಶಿಯಲ್ ಫೋರಂ ಬುರೈಧ ಕರ್ನಾಟಕ ಬ್ಲಾಕ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಶೀದ್ ಉಚ್ಚಿಲ, ಅನಿವಾಸಿ ಭಾರತೀಯರ ಸಂಕಷ್ಟಗಳಿಗೆ ಸದಾ ಆಸರೆಯಾಗಿ ನಿಲ್ಲುವ ಇಂಡಿಯನ್ ಸೋಶಿಯಲ್ ಫೋರಂ ಇದರ ಕಾರ್ಯಚಟುವಟಿಕೆಯನ್ನು ವಿವರಿಸುತ್ತಾ, ಸ್ನೇಹ ಸಮ್ಮಿಲನ ಎಂಬ ಶೀರ್ಷಿಕೆಯಡಿಯಲ್ಲಿ ಅನಿವಾಸಿ ಕನ್ನಡಿಗರ ಸಮ್ಮಿಲನವನ್ನು ಹಮ್ಮಿಕೊಂಡಿದ್ದೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಎಲ್ಲಾ ಅನಿವಾಸಿಗಳಿಗೆ ಆಹ್ವಾನ ನೀಡಿದರು.
ಬುರೈಧದ ಅಲ್ ಸಧೀಮ್ ಇಸ್ತಿರಾಹ್ ದಲ್ಲಿ ಜೂನ್ 23 ರಂದು ನಡೆಯಲಿರುವ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಭಾಗವಾಗಿ ಅನಿವಾಸಿಯರಿಗಾಗಿ ವಿವಿಧ ಕ್ರೀಡಾ ಕೂಟ, ಸಾರ್ವಜನಿಕ ಭಾಷಣ, ಮಹಿಳೆಯರಿಗೆ ಮತ್ತು ಮಕ್ಕಳಿಗಾಗಿ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಸದಾ ವೃತ್ತಿಪರ ಜೀವನದಲ್ಲಿ ನಿರತರಾಗಿರುವ ಅನಿವಾಸಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌದಿ ಅರೇಬಿಯಾದಲ್ಲಿ ಸ್ನೇಹ ಬಾಂಧವ್ಯವನ್ನು ಗಟ್ಟಿಗೊಳಿಸಲು ಮತ್ತು ಅನಿವಾಸಿ ಕನ್ನಡಿಗರೊಂದಿಗೆ ಬೆರೆಯುವ ಒಂದು ಮಹತ್ತರ ಅವಕಾಶ ನೀಡುತ್ತದೆ. ಅಲ್ಲದೇ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಯಶಸ್ವಿಗಾಗಿ ಪರಿಶ್ರಮಿಸಲು ಕಾರ್ಯಕರ್ತರಿಗೆ ಅವರು ಕರೆ ನೀಡಿದರು.
ಈ ವೇಳೆ ಬ್ಲಾಕ್ ಸಮಿತಿ ಸದಸ್ಯರು – ಸ್ನೇಹ ಸಮ್ಮಿಲನ ಕಾರ್ಯಕ್ರಮದ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಂಡಿಯನ್ ಸೋಶಿಯಲ್ ಫೋರಂ ಬುರೈಧ ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ರಶೀದ್ ಉಚ್ಚಿಲ, ಬುರೈಧ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಸಯ್ಯದ್ ಅಲಿ ಕಿನ್ನಿಗೋಳಿ, ಒನೈಝ ಬ್ರಾಂಚ್ ಅಧ್ಯಕ್ಷರಾದ ಆಸೀಫ್ ಪುತ್ತೂರು, ಕಾರ್ಯದರ್ಶಿಗಳಾದ ಅಫೀಜ್ ಕೃಷ್ಣಾಪುರ ಹಾಗು ಗುಲ್ಝಾರ್ ಅಡ್ಡೂರ್ ಉಪಸ್ಥಿತರಿದ್ದರು.