Home Uncategorized ಮಡಿಕೇರಿ: ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಮಡಿಕೇರಿ: ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಪೊನ್ನಂಪೇಟೆ: ಪೊನ್ನಂಪೇಟೆ ಮಾಸ್ ಬಾಯ್ಸ್ ವತಿಯಿಂದ  ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿರುವ ಪೊನ್ನಂಪೇಟೆ ಪ್ರೀಮಿಯರ್ ಲೀಗ್ -2 ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ಕೆ.ಜಿ. ಬೋಪಯ್ಯ  ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕಳೆದೆರಡು ವರ್ಷದಿಂದ ಕೋವಿಡ್ ಕಾರಣದಿ೦ದ ಕ್ರೀಡೆಗಳಿಗೆ ಹಿನ್ನಡೆಯಾಗಿತ್ತು. ಈಗ ಮತ್ತೆ ಕ್ರೀಡಾ ಚಟುವಟಿಕೆಗಳು ಗರಿಗೆದರಿವೆ. ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವುದರಿಂದ  ಕೋವಿಡ್ ಇಳಿಮುಖ ವಾಗುತ್ತಿದೆ. ಆದರೂ  ಸಾಮಾಜಿಕ ಅಂತರ ವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ಜಾಗೃತರಾಗಿರಬೇಕು. ಕ್ರೀಡೆ ಪರಸ್ಪರ ಸ್ನೇಹ ಸಂಬಂಧವನ್ನು ಬೆಸೆಯುವ ವೇದಿಕೆ ಯಾಗಿದ್ದು, ಎಲ್ಲಾ ಆಟಗಾರರು ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಳ್ಳಬೇಕು ಎಂದರು.

Join Whatsapp
Exit mobile version