ವಿಧಾನಮಂಡಲ ಅಧಿವೇಶನದಲ್ಲಿ ರೈತರ ಬೇಡಿಕೆಗಳ ಬಗ್ಗೆ ಪ್ರಸ್ತಾಪ: ಡಿ.ಕೆ.ಶಿವಕುಮಾರ್ ಭರವಸೆ

Prasthutha|

ಬೆಳಗಾವಿ: ಬೆಳಗಾವಿ ಎಪಿಎಂಸಿ ಬಳಿ ತಮ್ಮ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಲವು ರೈತ ಸಂಘಟನೆಗಳ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

- Advertisement -

ಇದೇ ವೇಳೆ ಶಿವಕುಮಾರ್ ಅವರು, ಮುಂಬರುವ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಅವರ ಬೇಡಿಕೆಗಳ ಈಡೇರಿಕೆಗೆ ಸರಕಾರದ ಮೇಲೆ ಒತ್ತಡ ತರುವುದಾಗಿ ಭರವಸೆ ನೀಡಿದರು. ರೈತ ಮುಖಂಡ ಸಿದಗೌಡ ಮೊದಗಿ ಅವರಿಗೆ ಎಳನೀರು ಕುಡಿಸುವ ಮೂಲಕ ನಿರಶನ ಕೈಬಿಡುವಂತೆ ಮನವಿ ಮಾಡಿದರು. ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

Join Whatsapp
Exit mobile version