ನಾಳೆ ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Prasthutha|

ಬೆಂಗಳೂರು: ನಾಳೆ ಕರ್ನಾಟಕಕ್ಕೆ ರಾಷ್ಡ್ರಪತಿ ದ್ರೌಪದಿ ಮುರ್ಮು  ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.20ಕ್ಕೆ ದೆಹಲಿಯಿಂದ ಹೆಚ್‌ಎಎಲ್ ಏರ್ಪೋರ್ಟ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ನಿಗದಿತ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ.

- Advertisement -

ಸಂಜೆ 4 ಗಂಟೆಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ್ರಪತಿಗಳು ಸಂಸ್ಥಾಪನಾ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಮಹಿಳಾ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ ಎಂದು ಮಾಹಿತಿ ಬಂದಿದೆ. ರಾಷ್ಟ್ರಪತಿಗಳ ಾಗಮನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.