ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷ ಜಂಟಿ ಅಭ್ಯರ್ಥಿ ಯಶವಂತ ಸಿನ್ಹಾಗೆ ಝಡ್ ಭದ್ರತೆ

Prasthutha|

ನವದೆಹಲಿ: ರಾಷ್ಟ್ರಪತಿ ಮತದಾನ ಕಣ ಕಾವೇರಿದ್ದು, ಪ್ರತಿಪಕ್ಷಗಳು ಜಂಟಿ ಅಭ್ಯರ್ಥಿ ಯಶವಂತ ಸಿನ್ಹಾ ಅವರಿಗೆ ಕೇಂದ್ರ ಸರ್ಕಾರ ಝಡ್ ಹಂತದ ಭದ್ರತೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸಿನ್ಹಾ ಅವರಿಗೆ ಭದ್ರತೆಯನ್ನು ವ್ಯವಸ್ಥೆಗೊಳಿಸುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಗೆ ಗೃಹ ಸಚಿವಾಲಯ ಸೂಚಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದರೊಂದಿಗೆ ಎಂಟರಿಂದ ಹತ್ತು ಮಂದಿ ಸಶಸ್ತ್ರ ಸಿಬ್ಬಂದಿ ಸಿನ್ಹಾ ಅವರಿಗೆ ಭದ್ರತೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

- Advertisement -

ಸಿನ್ಹಾ ಅವರು ಜೂನ್ 27 ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.

NDA ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಒಕ್ಕೂಟ ಸರ್ಕಾರ ಝಡ್ ಪ್ಲಸ್ ಭದ್ರತೆಯನ್ನು ನೀಡಿದೆ.

Join Whatsapp