ಬೆಂಗಳೂರು: ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಎಚ್ ಎಎಲ್ ವಿಮಾನನಿಲ್ದಾಣದಲ್ಲಿ ಬರಮಾಡಿಕೊಂಡರು.
ನಾಳೆ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆ ಉದ್ಘಾಟನೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಗವಹಿಸಲಿದ್ದಾರೆ. ಬಳಿಕ ಶೃಂಗೇರಿಯ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.