Home ಟಾಪ್ ಸುದ್ದಿಗಳು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮನ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮನ

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಬೆಂಗಳೂರಿನಲ್ಲಿ ಜೂ್ 13 ಮತ್ತು 14 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ  ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ ( ಇಸ್ಕಾನ್ ) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ  ಗೋವಿಂದ ದೇವಾಲಯವನ್ನು ಲೋಕಾರ್ಪಣೆ  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಭಾರತದ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.

ಇದೇ ಸಮಯದಲ್ಲಿ ರಾಷ್ಟ್ರಪತಿಗಳೊಂದಿಗೆ ಆಗಮಿಸಿದ ಭಾರತದ ಮಹಿಳಾ ಪ್ರಥಮ ಪ್ರಜೆ ಸವಿತಾ ಕೋವಿಂದ್ ಅವರನ್ನೂ ಸಹ  ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ  ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತಪ್ರತಾಪ್ ರೆಡ್ಡಿ,  ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಕಾರ್ಯದರ್ಶಿ ಹೇಮಲತಾ,  ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಇತರ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp
Exit mobile version