ಹೊಸದಿಲ್ಲಿ: ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರದ್ದು ಕೇವಲ ‘ಲಿಪ್ ಸರ್ವೀಸ್’ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಟೀಕಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್ ವೇಳೆ ವಿವಿಧ ರಾಜ್ಯಗಳ ಸ್ಥಬ್ಧ ಚಿತ್ರಗಳನ್ನು ತಿರಸ್ಕರಿಸಿದ ಕ್ರಮದ ವಿರುದ್ಧ ಲೋಕಸಭೆಯಲ್ಲಿ ವಾಗ್ದಾಳಿ ನಡೆಸಿದ ಸಂಸದೆ, ರಾಷ್ಟ್ರಪತಿ ಬರೆದು ಕೊಟ್ಟದ್ದನ್ನು ಓದುವ ಕೆಲಸ ಮಾತ್ರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ತಮ್ಮ ಭಾಷಣದಲ್ಲಿ ರಾಷ್ಟ್ರಪತಿಗಳು ಭಾರತದ ಹಕ್ಕುಗಳಿಗಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾತನಾಡಿದರು. ಆದರೆ ಇದು ಅವರ ‘ಲಿಪ್ ಸರ್ವೀಸ್’ ಮಾತ್ರವಾಗಿದೆ ಎಂದು ಮೊಯಿತ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್ನಲ್ಲಿ ಸುಭಾಷ್ ಚಂದ್ರ ಬೋಸ್ ಅವರನ್ನೊಳಗೊಂಡ ಪಶ್ಚಿಮ ಬಂಗಾಳದ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು.