ನಾಳೆ ಚಾಮರಾಜನಗರಕ್ಕೆ ರಾಷ್ಟ್ರಪತಿ ಭೇಟಿ: ಕಾರ್ಯಕ್ರಮದಲ್ಲಿ ಸಿಎಂ ಭಾಗಿ

Prasthutha|

ಬೆಂಗಳೂರು: ಚಾಮರಾಜನಗರಕ್ಕೆ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಭೇಟಿ ನೀಡುತ್ತಿದ್ದಾರೆ.

- Advertisement -


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯಲ್ಲಿ ಚಾಮರಾಜನಗರಕ್ಕೆ ಒಂದೇ ಬಾರಿಯೂ ಭೇಟಿ ನೀಡಿರಲಿಲ್ಲ. ಇಲ್ಲಿಗೆ ಭೇಟಿ ನೀಡಿದವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಭೀತಿಯಲ್ಲಿ ಅವರು ಅಲ್ಲಿಗೆ ಭೇಟಿ ನೀಡಿಲ್ಲ ಎನ್ನಲಾಗುತ್ತಿದೆ.

- Advertisement -


ನಾಳೆ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆ ಉದ್ಘಾಟನೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.


ಮುಖ್ಯಮಂತ್ರಿಯಾಗಿದ್ದ ವೇಳೆ ಸಿದ್ದರಾಮಯ್ಯ ಅವರು ಮೂಢನಂಬಿಕೆಗೆ ಬೆಲೆ ಕೊಡದೇ ತಮ್ಮ ಚಾಮರಾಜನಗರ ಪಟ್ಟಣಕ್ಕೆ 10ಕ್ಕಿಂತ ಹೆಚ್ಚು ಬಾರಿ ಭೇಟಿ ನೀಡಿ ವಿವಿಧ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿದ್ದರು. ಆದರೂ ಅವರು ಐದು ವರ್ಷದ ಅಧಿಕಾರ ಪೂರೈಸಿದರು.


Join Whatsapp