ರಾಷ್ಟ್ರಪತಿ ಭೇಟಿ ಹಿನ್ನೆಲೆ: ಎರಡು ದಿನ ಶೃಂಗೇರಿ ಪಟ್ಟಣ ಬಂದ್ ಮಾಡಲು ಜಿಲ್ಲಾಡಳಿತದ ಆದೇಶಕ್ಕೆ ವ್ಯಾಪಾರಿಗಳ ಆಕ್ರೋಶ

Prasthutha|

ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಕ್ಟೋಬರ್ 8ರಂದು ಶೃಂಗೇರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅ.7 ಮತ್ತು ಅ.8ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿರುವುದಕ್ಕೆ ಸಾರ್ವಜನಿಕರು, ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

  ಜಿಲ್ಲಾಡಳಿತ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವ್ಯಾಪಾರಸ್ಥರು, ಈ ಎರಡು ದಿನಗಳ ವ್ಯಾಪಾರ ನಷ್ಟವನ್ನು ತುಂಬಿಕೊಡುವಂತೆ ಒತ್ತಾಯಿಸಿದ್ದಾರೆ.

  ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಲಾಗಿದ್ದು, ನವರಾತ್ರಿ ಸಂದರ್ಭದಲ್ಲಿ ಈ ರೀತಿ ಮಾಡಿದರೆ ನಮ್ಮ ಗತಿ ಏನು ಎಂದು ವ್ಯಾಪಾರಿಗಳು, ಸಾರ್ವಜನಿಕರು ಪ್ರಶ್ನಿಸಿದ್ದಾರೆ.

- Advertisement -

ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆ ಸಿಎಂ ಬೊಮ್ಮಾಯಿ ಕೂಡ ಚಾಮರಾಜನಗರಕ್ಕೆ ಆಗಮಿಸುತ್ತಿದ್ದಾರೆ.

Join Whatsapp