ನವದೆಹಲಿ: ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರಕಾರವು ಝಡ್ ಪ್ಲಸ್ ಭದ್ರತೆ ಕಲ್ಪಿಸಿದೆ. ಇಂದಿನಿಂದಲೇ ಅನ್ವಯವಾಗುವಂತೆ ದ್ರೌಪದಿ ಮುರ್ಮು ಅವರಿಗೆ ಭದ್ರತೆ ಒದಗಿಸಲಾಗಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆಯು (ಸಿಆರ್‌ಪಿಎಫ್) ದ್ರೌಪದಿ ಮುರ್ಮುಗೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಲಿದ್ದು, ಇಂದಿನಿಂದಲೇ ಭದ್ರತೆ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೆನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮು ಅವರನ್ನು ಘೋಷಿಸಿದ್ದರು. ದ್ರೌಪದಿ ಮುರ್ಮು ಅವರು ಜಾರ್ಖಂಡ್ನ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.