ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡಿದ ಆಂಧ್ರ ಸಿಎಂ

Prasthutha|

ಅಮರಾವತಿ: ವೈಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಗುರುವಾರ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಿದ್ದಾರೆ

- Advertisement -

ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗೆದ್ದರೆ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಎಸ್ಸಿ, ಎಸ್ಟಿ, ಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಪ್ರಾತಿನಿಧ್ಯಕ್ಕೆ ಒತ್ತು ನೀಡುತ್ತಿರುವ ತಮ್ಮ ಪಕ್ಷದ ಆಶಯಕ್ಕೆ ಅನುಗುಣವಾಗಿ ಜಗನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

- Advertisement -

ಕಳೆದ ಮೂರು ವರ್ಷಗಳಲ್ಲಿ, ಜಗನ್ ಈ ಸಮುದಾಯಗಳ ಉನ್ನತಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ ಮತ್ತು ಸಂಪುಟದಲ್ಲಿ ಅವರಿಗೆ ಉತ್ತಮ ಪ್ರಾತಿನಿಧ್ಯವನ್ನು ಖಚಿತಪಡಿಸಿದ್ದಾರೆ.

Join Whatsapp