Home ಟಾಪ್ ಸುದ್ದಿಗಳು ರಾಷ್ಟ್ರಪತಿ ಚುನಾವಣೆ: ಮೋದಿ ಸಹಿತ ಹಲವರಿಂದ ಮತದಾನ

ರಾಷ್ಟ್ರಪತಿ ಚುನಾವಣೆ: ಮೋದಿ ಸಹಿತ ಹಲವರಿಂದ ಮತದಾನ

ನವದೆಹಲಿ: ಮುಂದಿನ ರಾಷ್ಟ್ರಪತಿ ಆಯ್ಕೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಸಂಜೆ 5 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. 

ನವದೆಹಲಿಯಲ್ಲಿ ಸಂಸತ್ ಭವನದಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಿದರು. ಉತ್ತರ ಪ್ರದೇಶದ ರಾಜಧಾನಿ ಲಕ್ನೋ ನಗರದಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಮತ ಚಲಾಯಿಸಿದರು. ರಾಷ್ಟ್ರಪತಿ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತರ ಪ್ರದೇಶದ ಪಾತ್ರ ನಿರ್ಣಾಯಕವಾಗಿದೆ.

ಕರ್ನಾಟಕದಲ್ಲಿ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿಧಾನಸೌಧದ 106ನೇ ಕೊಠಡಿಯಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಸಂಸದ ಶ್ರೀನಿವಾಸ ಪ್ರಸಾದ್ ಬೆಂಗಳೂರಿನಲ್ಲಿಯೇ ಮತ ಚಲಾಯಿಸಲಿದ್ದಾರೆ. ಉಳಿದಂತೆ 27 ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು ಬೆಂಗಳೂರಿನಲ್ಲಿ ಮತದಾನ ಮಾಡಲಿದ್ದಾರೆ.

ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ನಗರದ ಖಾಸಗಿ ಹೊಟೆಲ್ನಲ್ಲಿ ವಾಸ್ತವ್ಯ ಹೂಡಿದ್ದ ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಎಲ್ಲಾ  ಬಿಜೆಪಿ ಶಾಸಕರು ಮತ್ತು ಸಚಿವರು ಒಟ್ಟಾಗಿಯೇ ವಿಧಾನಸೌಧಕ್ಕೆ ಬಂದು ಮತ ಚಲಾಯಿಸಿದ್ದಾರೆ.

 ಕರ್ನಾಟಕದ ಪ್ರಮುಖ ಪ್ರಾದೇಶಿಕ ಪಕ್ಷ ಜೆಡಿಎಸ್ ಸಹ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಘೋಷಿಸಿಕೊಂಡಿದೆ.

Join Whatsapp
Exit mobile version