ರಾಷ್ಟ್ರಪತಿ ಚುನಾವಣೆ; ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ

Prasthutha|

ಹೊಸದಿಲ್ಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳ ಮುಂದೆ ದೆಹಲಿಯಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ  ಪ್ರಧಾನಿ ಮೋದಿ,ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದೆ. ಅವರ ಉಮೇದುವಾರಿಕೆಯ ಬಗ್ಗೆ ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಭಾರತದ ಅಭಿವೃದ್ಧಿಯ ದೃಷ್ಟಿಕೋನ ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ.

ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ದೇಶದ ಬುಡಕಟ್ಟು ಜನಾಂಗದ ಮೊದಲ ಮಹಿಳಾ ರಾಷ್ಟ್ರಪತಿ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ. ಈ ಮೊದಲು ಯುಪಿಎ ಮೈತ್ರಿಕೂಟದ ಸರ್ಕಾರವಿದ್ದಾಗ ಪ್ರತಿಭಾ ಪಾಟೀಲ್ ರಾಷ್ಟ್ರಪತಿಯಾಗಿದ್ದರು.

Join Whatsapp