ರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ

Prasthutha|

ದ್ರೌಪದಿ ಮುರ್ಮು-ಯಶವಂತ್ ಸಿನ್ಹಾ ನಡುವೆ ನೇರ ಹಣಾಹಣಿ

- Advertisement -

ಹೊಸದಿಲ್ಲಿ: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಸೋಮವಾರ ಮತದಾನ ಆರಂಭವಾಗಿದೆ. ಎನ್‌ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು  ಹಾಗೂ  ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ನೇರ ಹಣಾಹಣಿ ನಡೆಯಲಿದೆ.

ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ದೇಶದಾದ್ಯಂತ ಸುಮಾರು 4,800 ಚುನಾಯಿತ ಸಂಸದರು ಮತ್ತು ಶಾಸಕರು ಇಂದು ಮತ ಚಲಾಯಿಸುತ್ತಿದ್ದಾರೆ. ಸಂಸತ್ ಭವನ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

- Advertisement -

ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ಹೊಸ  ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Join Whatsapp