ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ

Prasthutha|

ನವದೆಹಲಿ: ರಾಷ್ಟ್ರಪತಿ ಚುನಾವಣಾ ರಂಗ ಕಾವೇರಿದ್ದು, ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ತಿಳಿಸಿದ್ದಾರೆ.

- Advertisement -

ರಾಷ್ಟ್ರಪತಿ ಚುನಾವಣೆಗೆ ನಾವು ಜೂನ್ 27 ರಂದು ಬೆಳಿಗ್ಗೆ 11.30 ಕ್ಕೆ ನಾಮಪತ್ರ ಸಲ್ಲಿಸಲಿದ್ದೇವೆ ಎಂದು ಇಂದು ನಡೆದ ಪ್ರತಿಪಕ್ಷಗಳ ಸಭೆಯಲ್ಲಿ NCP ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯು ಜುಲೈ 18 ರಂದು ನಡೆಯಲಿದ್ದು, ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರನ್ನು ಆಯ್ಕೆಗೊಳಿಸಲಾಗಿದೆ.



Join Whatsapp