ಜು.18ರಂದು ರಾಷ್ಟ್ರಪತಿ ಚುನಾವಣೆ: ರಾಜ್ಯಗಳಿಗೆ ಬ್ಯಾಲೆಟ್ ಬಾಕ್ಸ್ ರವಾನೆ

Prasthutha|

ಬೆಂಗಳೂರು: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಅವಶ್ಯಕ ಸಾಮಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ಗಳನ್ನು ಇಂದು ನವದೆಹಲಿಯ ಭಾರತ ಚುನಾವಣಾ ಆಯೋಗದ ಕೇಂದ್ರ ಕಚೇರಿಯಿಂದ ಆಯಾ ರಾಜ್ಯಗಳಿಗೆ ರವಾನಿಸಲಾಯಿತು.

- Advertisement -

ನಮ್ಮ ರಾಜ್ಯದ ಬ್ಯಾಲೆಟ್ ಜರ್ನಿಯ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರು ವಹಿಸಿದ್ದು, ಇಂದು ಸಂಜೆ ನವದೆಹಲಿಯಿಂದ ನಿರ್ಗಮಿಸಿ ರಾತ್ರಿ 8:15 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ.

ಈ ವಿಶೇಷ ಬ್ಯಾಲೆಟ್ ಜರ್ನಿಯ ಮುಖಾಂತರ ರಾಜ್ಯಕ್ಕೆ ಆಗಮಿಸುವ ಮತದಾನದ ಸಾಮಗ್ರಿಗಳನ್ನು ವಿಧಾನಸೌಧದ ಇದಕ್ಕಾಗಿ ಮೀಸಲಿಟ್ಟಿರುವ ಕೊಠಡಿ ಸಂಖ್ಯೆ 108 ರಲ್ಲಿ (Strong Room) ಶೇಖರಿಸಿಡಲಾಗುವುದು.

- Advertisement -

ಇಂದು ರಾತ್ರಿ 9 ಗಂಟೆಗೆ ವಿಧಾನಸೌಧ ತಲುಪಲಿರುವ ಈ ವಿಶೇಷ ಬ್ಯಾಲೆಟ್ ಜರ್ನಿಯನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ರಾಷ್ಟ್ರಪತಿ ಚುನಾವಣೆಯ ರಾಜ್ಯ ಅಧಿಕಾರಿಯಾಗಿ ನೇಮಕಗೊಂಡಿರುವ  ವಿಶಾಲಾಕ್ಷಿ ಅವರು ಸ್ವಾಗತಿಸಲಿದ್ದಾರೆ.



Join Whatsapp