Home ಟಾಪ್ ಸುದ್ದಿಗಳು ಕರ್ನಾಟಕದ 21 ಅಧಿಕಾರಿಗಳಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ

ಕರ್ನಾಟಕದ 21 ಅಧಿಕಾರಿಗಳಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ

ಬೆಂಗಳೂರು: ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಮತ್ತು ಪ್ರಶಂಸನೀಯ ಪದಕ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 21 ಮಂದಿ ಅಧಿಕಾರಿಗಳ ಹೆಸರು ಪ್ರಕಟವಾಗಿದೆ.


ಎಡಿಜಿಪಿ ಸೌಮೇಂದು ಮುಖರ್ಜಿ, ಡಿವೈಎಸ್ ಪಿ ಸುಧೀರ್ ಹೆಗ್ಡೆ ಅವರಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಪ್ರಶಸ್ತಿ ನೀಡಲಾಗುತ್ತದೆ. ಅಲ್ಲದೇ ಐಜಿಪಿ ರಮಣ್ ಗುಪ್ತಾ, ಐಜಿಪಿ ಪ್ರವೀಣ್ ಮಧುಕರ್ ಸೇರಿದಂತೆ ಕರ್ನಾಟಕದ 21 ಜನರ ಪಟ್ಟಿ ಬಿಡುಗಡೆಯಾಗಿದೆ. ವಿಶಿಷ್ಟ ಸೇವಾ ಪದಕ ಭಾರತೀಯ ಸಶಸ್ತ್ರ ಪಡೆಗಳಲ್ಲಿ ನೀಡುವ ಒಂದು ಪ್ರಶಸ್ತಿಯಾಗಿದೆ.


ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುತ್ತಾರೆ.

Join Whatsapp
Exit mobile version