ಬೆಂಗಳೂರು: ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಸುದ್ದಿಗೋಷ್ಠಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆಸಲಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದಂತ ಮಧು ಬಂಗಾರಪ್ಪನವರು ದಿನಾಂಕ 20-02-2024ರಂದು ಬೆಳಿಗ್ಗೆ 11.30 ಗಂಟೆಗೆ ಕೊಠಡಿ ಸಂಖ್ಯೆ 112, ವಿಕಾಸಸೌಧ, ಬೆಂಗಳೂರು ಇಲ್ಲಿ 2024ರ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕುರಿತು ವಿವರ ನೀಡುವರು.
ನಾಳೆ ಬೆಳಿಗ್ಗೆ 11.30ಕ್ಕೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.