Home ಟಾಪ್ ಸುದ್ದಿಗಳು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಬೆಂಗಳೂರು : ಡೀಸೆಲ್, ಪೆಟ್ರೋಲ್, ಗ್ಯಾಸ್ ದರ ಏರಿಕೆಯ ವಿರುದ್ಧ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.

ಕತ್ತೆಯ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ಪ್ರತಿಭಟಿಸಿ ಸರಕಾರದ ವಿರುದ್ಧ ಅವರು ಆಕ್ರೋಶ ಹೊರಹಾಕಿದರು. ಇಂದು ಡೀಸೆಲ್, ಪೆಟ್ರೋಲ್, ಗ್ಯಾಸ್ ದರ ದಿನದಿಂದ ದಿನಕ್ಕೆ ಏರುತ್ತಲಿದೆ. ಬಡ ಜನರು, ಜನ ಸಾಮಾನ್ಯರ ಬೆನ್ನು ಮೂಳೆ ಮುರಿದು ಬಿದ್ದಿದೆ. ಬೆಲೆ ಏರಿಕೆ ಬಗ್ಗೆ ಕೇಂದ್ರ ಗಮನ ಹರಿಸುತ್ತಿಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದರು.

ಇನ್ನೊಂದೆಡೆ ರೈತರು ಕಣ್ಣೀರಿನಲ್ಲಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಸುತ್ತಲೂ ತಂತಿಬೇಲಿ ಹಾಕಿ ಮೊಳೆ ಹೊಡೆದಿರುವ ಸರಕಾರ ಈ ದೇಶವನ್ನು ಅಧೋಗತಿಗೆ ತಳ್ಳುತ್ತಿದೆ ಎಂದು ವಾಟಾಳ್ ನಾಗರಾಜ್ ಅಭಿಪ್ರಾಯ ಪಟ್ಟರು.

Join Whatsapp
Exit mobile version