ನವದೆಹಲಿ: ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ವಾಣಿಜ್ಯ ಬಳಕೆಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 92 ರೂಪಾಯಿ ಇಳಿಕೆ ಮಾಡಿದೆ.
ಇಂದಿನಿಂದ ಬೇರೆ ಬೇರೆ ಹೊಸ ನಿಯಮಗಳು ಜಾರಿಯಾಗಿದ್ದು, ಕಾರುಗಳ ದರ ದುಬಾರಿಯಾಗಲಿದೆ. ಔಷಧಗಳ ಬೆಲೆ ಇಳಿಕೆಯಾಗಲಿದ್ದು, ಹೊಸ ತೆರಿಗೆ ಪದ್ಧತಿ ಜಾರಿಯಾಗಲಿದೆ.
ಇನ್ನು ಇಂದಿನಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 92 ರೂಪಾಯಿ ಇಳಿಕೆ ಮಾಡಿದೆ. ಆದರೆ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.