ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 14 ರೂಪಾಯಿ ಏರಿಕೆ ಮಾಡಲಾಗಿದೆ.
ಗೃಹಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಪರಿಷ್ಕೃತ ಬೆಲೆ ಇಂದಿನಿಂದ (ಫೆಬ್ರವರಿ 1) ಅನ್ವಯವಾಗಲಿದೆ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ತುಸು ಹೆಚ್ಚಳ ಮಾಡಿದ್ದವು.
ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1769.50 ರೂ. ತಲುಪಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂ.ಗೆ ತಲುಪಿದೆ. ಮುಂಬೈನಲ್ಲಿ 1723.50 ರೂ., ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂ.ಗೆ ತಲುಪಿದೆ.