ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಏರಿಕೆ

Prasthutha|

ದೆಹಲಿ: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಏರಿಕೆಯಾಗಿದೆ.

- Advertisement -


ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಆದರೆ, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಪ್ರತಿ ವಾಣಿಜ್ಯ ಸಿಲಿಂಡರ್ ಗೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ.


ವಾಣಿಜ್ಯ ಸಿಲಿಂಡರ್ ಗಳ ಏರಿಕೆ ಜುಲೈ 1 ರಿಂದ ಜಾರಿಗೆ ಬರಲಿದೆ. ಈ ಹಿಂದೆ, ಜೂನ್ nಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು. ಪ್ರಸ್ತುತ, ಮುಂಬೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1733.50 ರೂ.ಗಳಾಗಿದ್ದು, ಜೂನ್ ನಲ್ಲಿ ಕೆಜಿಗೆ 1725 ರೂ. ಇತ್ತು. ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ನ ಬೆಲೆ 2190.5 ರೂ ಇದೆ.

Join Whatsapp