ಕುಂದಾಪುರ: ಅರ್ಚಕ ನೇಣು ಬಿಗಿದು ಆತ್ಮಹತ್ಯೆ

Prasthutha|

ಕುಂದಾಪುರ: ಅರ್ಚಕ ವೃತ್ತಿ ನಿರ್ವಹಿಸುತ್ತಿದ್ದ ಹಳ್ಳಾಡಿಯ ನಿವಾಸಿ ಗಣೇಶ್‌ ಕೆದ್ಲಾಯ (45) ಜು.13ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಬೆಳಗ್ಗೆ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿ ವಾಪಸು ಮನೆಗೆ ಬಂದವರು ಮನೆಯ ಒಳಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನಾರೋಗ್ಯ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.