ವಾರಣಾಸಿ: ಜ್ಞಾನವಾಪಿ ಮಸೀದಿಯ ಕೆಳಗಿರುವ ನೆಲಮಹಡಿಯಲ್ಲಿ ಹಿಂದೂ ಅರ್ಚಕರ ಕುಟುಂಬದ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು. ನೆಲ ಮಾಳಿಗೆಯ ಬೀಗ ಮುದ್ರೆಯನ್ನು ತೆರವುಗೊಳಿಸಬೇಕು ಎಂದು ಬುಧವಾರ ನ್ಯಾಯಾಲಯವು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ನಂತರ ಇದೀಗ ಬೀಗ ಮುದ್ರೆಯನ್ನು ತೆರವುಗೊಳಿಸಲಾಗಿದೆ.
ಜ್ಞಾನವಾಪಿ ಆವರಣದಲ್ಲಿ ಮಧ್ಯರಾತ್ರಿಯಲ್ಲಿ ಧಾರ್ಮಿಕ ಸಮಾರಂಭಗಳನ್ನು ನಡೆಸಲಾಯಿತು. ನೆಲಮಾಳಿಗೆಯಲ್ಲಿರುವ ವಿಗ್ರಹಕ್ಕೆ ಬುಧವಾರ ರಾತ್ರಿ 11 ಗಂಟೆಗೆ ಪೂಜೆ ನಡೆದಿದೆ. ಪೂಜೆಯ ಬಳಿಕ ಮಂಗಳಾರತಿಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು.
ಆದರೆ ಭಕ್ತರ ಪ್ರವೇಶಕ್ಕೆ ಯಾವುದೇ ಅವಕಾಶ ಇಲ್ಲ ಎಂದು ವಕೀಲ ಸೋಹನ್ ಲಾಲ್ ಆರ್ಯ ತಿಳಿಸಿದ್ದಾರೆ.
ಇಂದು ನಾವು ತುಂಬಾ ಹೆಮ್ಮೆಪಡುತ್ತೇವೆ. ನಿನ್ನೆ ನ್ಯಾಯಾಲಯದ ತೀರ್ಪು ಅಭೂತಪೂರ್ವವಾಗಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪೂಜೆ ಸಲ್ಲಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿತ್ತು. ಮಧ್ಯಾಹ್ನದ ವೇಳೆಗೆ ಪೂಜೆ ಕೂಡ ಆಗಿದೆ. ಆದರೆ ಅದನ್ನು ಭಕ್ತರಿಗೆ ಇನ್ನೂ ತೆರೆಯಲಾಗಿಲ್ಲ ಎಂದು ಹೇಳಿದ್ದಾರೆ. ವಕೀಲ ಧೀರೇಂದ್ರ ಪ್ರತಾಪ್ ಸಿಂಗ್, ಭಕ್ತ ಧೀರೇಂದ್ರ ಪ್ರತಾಪ್ ಸಿಂಗ್, ನ್ಯಾಯಾಲಯದ ಆದೇಶದಿಂದ ನಮಗೆ ಅತ್ಯಂತ ಸಂತೋಷವಾಗಿದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.