ಕನ್ನಡದ ಹಿರಿಯ ನಟಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Prasthutha|

ಬೆಂಗಳೂರು: ಕನ್ನಡ ಹಾಗು ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ X ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದಿದ್ದಾರೆ.

- Advertisement -

ಸಿನಿಮಾದ ನೈಜ ಪ್ರತೀಕವಾದ ಲೀಲಾವತಿಯಮ್ಮ ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಅವರು ಬರೆದುಕೊಂಡಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಶುಕ್ರವಾರ ಮಧ್ಯಾಹ್ನದ ವೇಳೆಗೆ ತೀವ್ರ ಆರೋಗ್ಯದಲ್ಲಿ ಏರುಪೇರು ಅನುಭವಿಸಿದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಲೀಲಾವತಿ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅದರೊಂದಿಗೆ ಕನ್ನಡ ಚಿತ್ರರಂಗದ ದೊಡ್ಡ ಕೊಂಡಿಯೊಂದು ಕಳಚಿ ಬಿದ್ದಂತಾಗಿದೆ. ಅವರ ಅಂತ್ಯಸಂಸ್ಕಾರವನ್ನು ಇಂದು ನೆಲಮಂಗಲದಲ್ಲಿರುವ ಅವರ ತೋಟ ಸೋಲದೇವನಹಳ್ಳಿಯಲ್ಲಿ ಮಾಡಲಾಗುತ್ತದೆ.

- Advertisement -

ನೆಲಮಂಗಲದ ಅಂಬೇಡ್ಕರ್‌ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.



Join Whatsapp