Home ಟಾಪ್ ಸುದ್ದಿಗಳು ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಅಲ್ಲಿನ ಆರ್ಡರ್ ಆಫ್‌ ದಿ ಡ್ರುಕ್ ಗ್ಯಾಲ್ಫೋ ಎಂಬ ಅತ್ಯತ್ತಮ ನಾಗರಿಕ ಪ್ರಶಸ್ತಿ ಅವರಿಗೆ ಪ್ರದಾನ ಮಾಡಲಾಗಿದೆ.

ನರೇಂದ್ರ ಮೋದಿ ಅವರಿಗೆ ಭೂತಾನ್ ದೊರೆ ಜಿಗ್ಮೆ ಖೇಸರ್ ನಾಂಗೇಲ್ ವಾಂಗ್ ಚುಕ್ ಅವರು ಈ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇದು ನನ್ನ ವೈಯಕ್ತಿಕ ಸಾಧನೆಯಲ್ಲ. 140 ಕೋಟಿ ಭಾರತೀಯರ ಸಾಧನೆ. ನಾನು ಈ ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಲು ಇಚ್ಛಿಸುತ್ತೇನೆ. ಎಲ್ಲಾ ಭಾರತೀಯರ ಪರವಾಗಿ ನಾನು ಈ ಪ್ರಶಸ್ತಿ ಸ್ವೀಕರಿಸುತ್ತೇನೆ. ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

2021ರ ಡಿಸೆಂಬರ್ 17 ರಂದು ಭೂತಾನ್ ನ 114ನೇ ರಾಷ್ಟ್ರೀಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.

Join Whatsapp
Exit mobile version