ಪ್ರಧಾನಿಯ ಗಾಢ ನಿದ್ರೆ; ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

‘ಪ್ರಧಾನಿಯ ಗಾಢ ನಿದ್ರೆ ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ’ ಎಂಬ ತಲೆ ಬರಹದಲ್ಲಿ ಮೋದಿ ವಿರುದ್ಧ ಟೀಕಾಪ್ರಹಾರ ಮಾಡಿ X ಪೋಸ್ಟ್ ಮಾಡಿದ ಸಿದ್ದರಾಮಯ್ಯ, ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ. ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ.ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ. ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ ಎಂದು ಕಿಡಿಗಾರಿದ್ದಾರೆ.

ಮೋದಿ ಮಂತ್ರವಿಷ್ಟೇ ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು ಎಂದು ವ್ಯಂಗ್ಯವಾಡಿದ ರಾಜ್ಯ‌ ಕಾಂಗ್ರೆಸ್, ಬಿಜೆಪಿ ಸಂಸದರ ಮಂತ್ರ ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು ಎಂದು ಮಾರ್ಮಿಕವಾಗಿ ಸಿಎಂ ಹೇಳಿದ್ದಾರೆ.

- Advertisement -

ಎದ್ದೇಳಿ, ಪ್ರಧಾನಮಂತ್ರಿಯವರೇ ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ಆಗ್ರಹಿಸಿದ ಮುಖ್ಯಮಂತ್ರಿ, ಇಡೀ ಪೋಸ್ಟನ್ನು ಮಾರ್ಮಿಕವಾಗಿ ಬರೆದುಕೊಂಡು, ಉತ್ತರಿಸಿ ಪ್ರಧಾನಿಗಳೇ ಎಂದು ಆಗ್ರಹ ಮಾಡಿದ್ದಾರೆ.



Join Whatsapp