Home ಟಾಪ್ ಸುದ್ದಿಗಳು ಕಾಲೇಜು ಆವರಣದಲ್ಲೇ ಪ್ರಿನ್ಸಿಪಾಲ್ ಆತ್ಮಹತ್ಯೆ

ಕಾಲೇಜು ಆವರಣದಲ್ಲೇ ಪ್ರಿನ್ಸಿಪಾಲ್ ಆತ್ಮಹತ್ಯೆ

ಬಾಗಲಕೋಟೆ: ಪದವಿ ಕಾಲೇಜು ಆವರಣದಲ್ಲೇ ನೇಣು ಹಾಕಿಕೊಂಡು ಪ್ರಿನ್ಸಿಪಾಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ.


ಹುನಗುಂದ ಸರ್ಕಾರಿ ಪದವಿ ಕಾಲೇಜಿನ ಪ್ರಿನ್ಸಿಪಾಲ್ ಆಗಿರುವ ನಾಗರಾಜ್ ಮುದಗಲ್ (57) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗಿನ ಜಾವ ಕಾಲೇಜ್ ಆವರಣದಲ್ಲಿಯ ಕ್ಯಾಂಟೀನ್ ಸ್ಟೇರ್ ಕೇಸ್ ಗ್ರಿಲ್ ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.


ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ನಾಗರಾಜ್ ಮುದಗಲ್ ಶವವನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಿನ್ಸಿಪಾಲ್ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.


ಮಂಗಳವಾರ ಸರ್ಕಾರಿ ಪದವಿ ಕಾಲೇಜ್ನಲ್ಲಿ “ಜನಪದ ಜಾತ್ರೆ ಹೊನ್ನ ಸಂಭ್ರಮ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೀಗಾಗಿ ಸೋಮವಾರ ರಾತ್ರಿಯವರೆಗೆ ಕಾರ್ಯಕ್ರಮಕ್ಕಾಗಿ ಗಣ್ಯರಿಗೆಲ್ಲ ಆಮಂತ್ರಣ ನೀಡಿ ಬಂದಿದ್ದ ಪ್ರಿನ್ಸಿಪಾಲ್ ಇಂದು ಬೆಳಿಗ್ಗೆ ಮನೆಗೆ ಹೋಗಿ ಕಾಲೇಜಿಗೆ ಬಂದು ನೇಣು ಹಾಕಿಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

Join Whatsapp
Exit mobile version