ಕೊಲ್ಕತ್ತಾ: ನೋಟುಗಳ ಮೇಲೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರವನ್ನು ಮುದ್ರಿಸುವಂತೆ ಸ್ವಾತಂತ್ರ್ಯ ಹೋರಾಟಗಾರ ಹರೇನ್ ಬಗ್ಚಿ ಬಿಸ್ವಾಸ್ ಕೊಲ್ಕತ್ತಾ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಕೊಲ್ಕತ್ತಾ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು(ಪಿಐಎಲ್) ಸಲ್ಲಿಸಿದ್ದಾರೆ.
‘ಮಹಾತ್ಮ ಗಾಂಧಿ’ ಅವರಂತೆ ಕರೆನ್ಸಿ ನೋಟುಗಳಲ್ಲಿ ನೇತಾಜಿ ಅವರ ಚಿತ್ರವನ್ನು ಏಕೆ ಸೇರಿಸಬಾರದು? ಸ್ವಾತಂತ್ರ್ಯ ಹೋರಾಟಕ್ಕೆ ನೇತಾಜಿ ಅವರ ಕೊಡುಗೆಗೆ ಭಾರತ ಸರ್ಕಾರವು ಸರಿಯಾದ ಮನ್ನಣೆಯನ್ನು ನೀಡಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊಲ್ಕತ್ತಾ ಹೈಕೋರ್ಟ್ ಸೋಮವಾರ ಎಂಟು ವಾರಗಳಲ್ಲಿ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 21 ರಂದು ನಡೆಯಲಿದೆ.