July 23, 2021

ಕೆ.ಎಂ.ಎಫ್. ನಿಂದ ತಯಾರಾಗುವ ಉತ್ಪನ್ನದ ಪೊಟ್ಟಣಗಳ ಮೇಲೆ ತುಳು ಲಿಪಿಯನ್ನು ಮುದ್ರಿಸಿ –ಶಾಸಕ ಕಾಮತ್ ಮನವಿ

ಮಂಗಳೂರು: ಕೆ.ಎಂ.ಎಫ್. ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಎಂದು ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಾತನಾಡುವ ತುಳುಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಳುಲಿಪಿ ಕಂಡು ಬಂದಿದೆ. ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್. ಸಂಸ್ಥೆಯ ಉತ್ಪನ್ನ ಪೊಟ್ಟಣಗಳ ಮೇಲೆ ತುಳುಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕಾಮತ್ ಮನವಿಯಲ್ಲಿ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!