ಮಾನವೀಯ ಸೇವೆಗೆ ಆದ್ಯತೆ – ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆ ಗುರಿ

Prasthutha|

ಬೆಂಗಳೂರು: ಬೆಂಗಳೂರಿನ ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆಯನ್ನು ವ್ಯಾಪಕವಾಗಿ ವಿಸ್ತರಿಸಲು ಕಾರ್ಯಯೋಜನೆ ರೂಪಿಸಿದ್ದು, ವ್ಯಾಪಾರ, ವಹಿವಾಟು ನಡೆಸಲು ಆಸಕ್ತಿ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಬೆಂಗಳೂರು ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆ – ಜಿತೋ ಅಧ್ಯಕ್ಷ ಇಂದರ್ ಚಂದ್ ಬೊಹ್ರಾ ಹೇಳಿದ್ದಾರೆ.

- Advertisement -

ಚಾಮರಾಜಪೇಟೆಯ ಜಿತೋ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಯಲ್ಲಿ ಸಮನ್ವಯತೆ ಮತ್ತು ಸೌಹಾರ್ದತೆಗೆ ಒತ್ತು ನೀಡಿದ್ದು, ಮಾನವೀಯ ಸೇವೆ ಸಂಘಟನೆಯ ಮುಖ್ಯ ಗುರಿಯಾಗಿದೆ. ಇಲ್ಲಿ ಯಾವುದೇ ರೀತಿಯ ಸ್ಪರ್ಧೆಗೆ ಆದ್ಯತೆ ನೀಡದೇ ಮಾನವೀಯ ಸೇವಾ ಕಾರ್ಯದಲ್ಲಿ ಮುಂದುವರೆಯುವುದು ನಮ್ಮ ತತ್ವವಾಗಿದೆ ಎಂದರು.

ಬೆಂಗಳೂರು ಉತ್ತರ ವಿಭಾದ ಜಿತೋ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸುಧೀರ್ ಗಡಿಯಾ ಮಾತನಾಡಿ, ಮುಂಬರುವ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ, ಕ್ರೀಡಾ ಚಟುವಟಿಕೆಗೆ ಆದ್ಯತೆ, ವಿದ್ಯಾರ್ಥಿಗಳಿಗೆ ವಸತಿ ಮತ್ತು ಶಿಕ್ಷಣಕ್ಕೆ ವ್ಯವಸ್ಥೆ, ದಾನಿಗಳ ನೆರವಿನಿಂದ ಶ್ರಮಿಕರನ್ನು ಮೇಲೆತ್ತಲು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

- Advertisement -

ಬೆಂಗಳೂರು ಜಿತೋ ಸಂಘಟನೆಯ ಮಹಿಳಾ ವಿಭಾಗದ ಅಧ್ಯಕ್ಷೆ ಬಿಂದು ರೋಷಣಿ ಮಾತನಾಡಿ, ಸಂಘಟನೆ ಪ್ರತಿಯೊಬ್ಬ ಮಹಿಳೆಯನ್ನು ತಲುಪಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಭೆಗಳನ್ನು ಪೋಷಿಸಲು ವೇದಿಕೆ ಕಲ್ಪಿಸಲಾಗುತ್ತಿದೆ. ಮಹಿಳೆಯರಿಗಾಗಿ ಧಾರ್ಮಿಕ, ಕ್ರಿಯಾತ್ಮಕ ಮತ್ತು ಸಬಲೀಕರಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

Join Whatsapp